Last Updated:
ಇಂಗ್ಲೆಂಡ್ ವಿರುದ್ಧ ಕಾರ್ಡಿಫ್ನಲ್ಲಿ ನಡೆಯುತ್ತಿರುವ ಎರಡನೇ ಏಕದಿನ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಕೇವಲ 4 ರನ್ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಇದರೊಂದಿಗೆ ಅವರು ರಾಹುಲ್ ದ್ರಾವಿಡ್ ದಾಖಲೆಯನ್ನು ಮುರಿದರು.
ಭಾರತ (India) ಮತ್ತು ಇಂಗ್ಲೆಂಡ್ (England) ನಡುವಿನ ಎರಡನೇ ಏಕದಿನ (ODI) ಪಂದ್ಯದಲ್ಲಿ ಟೀಮ್ ಇಂಡಿಯಾ (Team India) ಮೊದಲ ವಿಕೆಟ್ ಕಳೆದುಕೊಂಡ ನಂತರ ವಿರಾಟ್ ಕೊಹ್ಲಿ (Virat Kohli) ಬ್ಯಾಟಿಂಗ್ಗೆ ಬಂದರು. ವಿರಾಟ್ ಕೇವಲ 4 ರನ್ ಗಳಿಸುವ ಮೂಲಕ ಇತಿಹಾಸ ಸೃಷ್ಟಿಸಿದರು. ಎಡ್ಜ್ಬಾಸ್ಟನ್(Edgbaston)ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ವಿರಾಟ್ ಕೇವಲ 5 ರನ್ ಗಳಿಸಿ ನಿರಾಶೆಯೊಂದಿಗೆ ಹೊರಗೆ ಹೋಗಿದ್ದರು. ಆದರೆ ಈ ಎರಡನೇ ಪಂದ್ಯದಲ್ಲಿ ಕೇವಲ 4 ರನ್ ಗಳಿಸುವ ಮೂಲಕ ರಾಹುಲ್ ದ್ರಾವಿಡ್ (Rahul Dravid) ಅವರ ದಾಖಲೆಯನ್ನು ಮುರಿದು. ಇಂಗ್ಲೆಂಡ್ ನೆಲದಲ್ಲಿ ಕಿಂಗ್ ಕೊಹ್ಲಿ ಹೊಸ ಇತಿಹಾಸ ಬರೆದರು.
ವಿರಾಟ್ ಕೊಹ್ಲಿ 4 ರನ್ ಗಳಿಸುವ ಮೂಲಕ ತಮ್ಮ ಖಾತೆ ತೆರೆದರು. ಇದರೊಂದಿಗೆ ಕೊಹ್ಲಿ ಒಂದು ದೊಡ್ಡ ಮೈಲುಗಲ್ಲು ಸಾಧಿಸಿದರು. ಇಂಗ್ಲೆಂಡ್ ನೆಲದಲ್ಲಿ ಟೆಸ್ಟ್, ಏಕದಿನ ಮತ್ತು ಟಿ20 ಎಲ್ಲಾ ಮೂರು ಸ್ವರೂಪಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಟೀಮ್ ಇಂಡಿಯಾ ಬ್ಯಾಟರ್ಗಳ ಪಟ್ಟಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡರು. ಇಂಗ್ಲೆಂಡ್ ನೆಲದಲ್ಲಿ ಮೂರು ಸ್ವರೂಪಗಳಲ್ಲಿ 2000ಕ್ಕೂ ಹೆಚ್ಚು ರನ್ ಗಳಿಸಿದ ಸಾಧನೆಯನ್ನು ಕೇವಲ 4 ಭಾರತೀಯ ಬ್ಯಾಟರ್ಗಳು ಮಾತ್ರ ಮಾಡಿದ್ದಾರೆ.
ವಿರಾಟ್ ಕೊಹ್ಲಿ ಇಂಗ್ಲೆಂಡ್ನಲ್ಲಿ ಟೆಸ್ಟ್, ಏಕದನ ಮತ್ತು ಟಿ20 ಎಲ್ಲಾ ಮೂರು ಸ್ವರೂಪಗಳಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ ಆಗಿದ್ದಾರೆ. ಇದಕ್ಕೂ ಮುಂಚೆ ಈ ದಾಖಲೆ ರಾಹುಲ್ ದ್ರಾವಿಡ್ ಅವರ ಹೆಸರಿನಲ್ಲಿತ್ತು. ದ್ರಾವಿಡ್ ಅವರು ಇಂಗ್ಲೆಂಡ್ನಲ್ಲಿ 46 ಪಂದ್ಯಗಳ 56 ಇನ್ನಿಂಗ್ಸ್ಗಳಲ್ಲಿ 2645 ರನ್ ಗಳಿಸಿದ್ದರು. ಅವರ ಸರಾಸರಿ 55.1 ಆಗಿತ್ತು.
ಇಂಗ್ಲೆಂಡ್ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಬ್ಯಾಟರ್ಗಳು
- ವಿರಾಟ್ ಕೊಹ್ಲಿ: 2646 ರನ್ಗಳು
- ರಾಹುಲ್ ದ್ರಾವಿಡ್: 2645 ರನ್ಗಳು
- ಸಚಿನ್ ತೆಂಡೂಲ್ಕರ್: 2626 ರನ್ಗಳು
- ರೋಹಿತ್ ಶರ್ಮಾ: 2298 ರನ್ಗಳು
- ಸೌರವ್ ಗಂಗೂಲಿ: 1949 ರನ್ಗಳು
- ಎಂಎಸ್ ಧೋನಿ: 1869 ರನ್ಗಳು
ಇಂಗ್ಲೆಂಡ್ನಲ್ಲಿ ರಾಹುಲ್ ದ್ರಾವಿಡ್ ಅವರು 8 ಶತಕಗಳನ್ನು ಗಳಿಸಿದ್ದಾರೆ. ಆದರೆ ವಿರಾಟ್ ಕೊಹ್ಲಿ ಕೇವಲ 3 ಶತಕಗಳನ್ನು ಮಾತ್ರ ಗಳಿಸಿದ್ದಾರೆ. ಇದು ಗಮನಿಸಬೇಕಾದ ವಿಷಯ. ಇಂಗ್ಲೆಂಡ್ನಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಭಾರತೀಯ ಬ್ಯಾಟರ್ ರೋಹಿತ್ ಶರ್ಮಾ. ಅವರು ಒಟ್ಟು 9 ಶತಕಗಳನ್ನು ಗಳಿಸಿದ್ದಾರೆ. ಇದರ ನಂತರ ರಾಹುಲ್ ದ್ರಾವಿಡ್ (8 ಶತಕಗಳು) ಮತ್ತು ಸಚಿನ್ ತೆಂಡೂಲ್ಕರ್ (8 ಶತಕಗಳು) ಇದ್ದಾರೆ.
ಇಂಗ್ಲೆಂಡ್ನಲ್ಲಿ ಭಾರತೀಯ ಆಟಗಾರರಲ್ಲಿ ಅತಿ ಹೆಚ್ಚು ಅರ್ಧಶತಕಗಳನ್ನು ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಅವರು ಇಲ್ಲಿಯವರೆಗೆ 19 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಭಾರತ ತಂಡ 1-0 ಮುನ್ನಡೆಯಲ್ಲಿದೆ. ಈಗ ಎರಡನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಸತತ ಎರಡನೇ ಗೆಲುವು ಸಾಧಿಸಿ, ಸರಣಿಯನ್ನು ತನ್ನದಾಗಿಸಿಕೊಳ್ಳುವ ಗುರಿಯನ್ನು ಹೊಂದಿದೆ.
Virat Kohli: ಇಂಗ್ಲೆಂಡ್ ನೆಲದಲ್ಲಿ ಇತಿಹಾಸ ನಿರ್ಮಿಸಿದ ಕಿಂಗ್ ಕೊಹ್ಲಿ! ದ್ರಾವಿಡ್ ಹೆಸರಿನಲ್ಲಿದ್ದ ಸಾರ್ವಕಾಲಿಕ ದಾಖಲೆ ಬ್ರೇಕ್ ಮಾಡಿದ ರನ್ ಮಷಿನ್














