Last Updated:
ಮಹಿಳಾ ಟಿ20 ಏಷ್ಯಾಕಪ್ 2026ರ ಫೈನಲ್‌ನಲ್ಲಿ ಶ್ರೀಲಂಕಾ ತಂಡವನ್ನ 72 ರನ್ಗಳಿಂದ ಮಣಿಸಿದ ಭಾರತ ಮಹಿಳಾ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ.
ಮಹಿಳಾ ಟಿ20 ಏಷ್ಯಾಕಪ್ 2026ರ ಫೈನಲ್‌ನಲ್ಲಿ (Women’s Asia Cup) ಶ್ರೀಲಂಕಾ (India Women vs Sri Lanka Women) ತಂಡವನ್ನ 72 ರನ್ಗಳಿಂದ ಮಣಿಸಿದ ಭಾರತ ಮಹಿಳಾ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ದುಬೈನಲ್ಲಿ ನಡೆದ ಈ ರೋಚಕ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ ತಂಡ 5 ವಿಕೆಟ್ ನಷ್ಟಕ್ಕೆ 183 ರನ್‌ಗಳ ಬೃಹತ್ ಮೊತ್ತ ಪೇರಿಸಿತ್ತು. 184 ರನ್‌ಗಳ ಕಠಿಣ ಗುರಿಯನ್ನು ಬೆನ್ನಟ್ಟಿದ ಶ್ರೀಲಂಕಾ ತಂಡವನ್ನು ಭಾರತೀಯ ಬೌಲರ್‌ಗಳ ದಾಳಿಗೆ ತತ್ತರಿಸಿ 20 ಓವರ್ಗಳಲ್ಲಿ ತನ್ನೆಲ್ಲಾ ವಿಕೆಟ್ ಕಳೆದುಕೊಂಡು 110 ರನ್ಗಳಿಗೆ ಆಲೌಟ್ ಆಗಿ ಹೀನಾಯ ಸೋಲು ಕಂಡಿತು. ಈ ಫೈನಲ್ ಗೆಲ್ಲುವ ಮೂಲಕ ಭಾರತ ಮಹಿಳಾ ತಂಡ 4ನೇ ಟಿ20 ಏಷ್ಯಾಕಪ್ ಸೇರಿ ಒಟ್ಟಾರೆ 8ನೇ ಏಷ್ಯಾಕಪ್ ತನ್ನದಾಗಿಸಿಕೊಂಡಿತು.














