Last Updated:
ಭಾರತೀಯ ಮಹಿಳಾ ಆಟಗಾರರು ಏಷ್ಯನ್ ಕ್ರಿಕೆಟ್ ಕೌನ್ಸಿಲ್ ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ನಿರಾಕರಿಸಿದ್ದು, ಮತ್ತೆ ಪಾಕ್ ಸಚಿವನಿಗೆ ಮುಖಭಂಗವಾಗಿದೆ.
ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ (PCB) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿಯನ್ನು ಸ್ವೀಕರಿಸಲು ಭಾರತೀಯ ಮಹಿಳಾ ಕ್ರಿಕೆಟ್ ತಂಡ ನಿರಾಕರಿಸಿತು. ಅರ್ಧ ಗಂಟೆ ಕಾದರು ಭಾರತೀಯ ಮಹಿಳಾ ಕ್ರಿಕೆಟ್ ತಂಡ ಟ್ರೋಫಿ ಸ್ವೀಕರಿಸಲಿಲ್ಲ. ಇದ್ರಿಂದ ಮತ್ತೆ ಅವಮಾನದಿಂದ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ್ಯಕ್ಷ ಮೊಹ್ಸಿನ್ ನಖ್ವಿ ವೇದಿಕೆಯಿಂದ ಹೊರನಡೆದ ಪ್ರಸಂಗ ನಡೆದಿದೆ.














