Last Updated:
ಆರಂಭಿಕ ಆಘಾತದ ಹೊರಾಗಿಯೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಮಹಿಳಾ ತಂಡ, ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ಗಳ ಗೌರವಯುತ ಮೊತ್ತ ಕಲೆಹಾಕಿತು.
ಲಂಡನ್ನ ಐತಿಹಾಸಿಕ ಲಾರ್ಡ್ಸ್ ಮೈದಾನದಲ್ಲಿ ಭಾನುವಾರ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್ನ ಮಹಾ ಕದನದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡ, ಪ್ರಶಸ್ತಿ ಜಯಿಸಲು ಆಸ್ಟ್ರೇಲಿಯಾಕ್ಕೆ 151 ರನ್ಗಳ ಸ್ಪರ್ಧಾತ್ಮಕ ಗುರಿ ನೀಡಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕಿ ಸೋಫಿ ಮೊಲಿನೆಕ್ಸ್ ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಆರಂಭಿಕ ಆಘಾತದ ಹೊರತಾಗಿಯೂ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಮಹಿಳಾ ತಂಡ, ನಿಗದಿತ 20 ಓವರ್ಗಳಲ್ಲಿ 4 ವಿಕೆಟ್ ನಷ್ಟಕ್ಕೆ 150 ರನ್ಗಳ ಗೌರವಯುತ ಮೊತ್ತ ಕಲೆಹಾಕಿತು.













