Women’s T20 World Cup: ನಿರ್ಣಾಯಕ ಪಂದ್ಯದಲ್ಲಿ ಕೈಕೊಟ್ಟ ಮಧ್ಯಮ ಕ್ರಮಾಂಕ! ದಕ್ಷಿಣ ಆಫ್ರಿಕಾ ತಂಡಕ್ಕೆ ಸಾಧಾರಣ ಗುರಿ ನೀಡಿದ ಭಾರತ | ಕ್ರೀಡಾ ಸುದ್ದಿ | ACTPnews

ಶಫಾಲಿ ವರ್ಮಾ


Last Updated:

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿದೆ. ಆರಂಭಿಕ ಆಟಗಾರ್ತಿಯರು ಸ್ಪೋಟಕ ಆರಂಭ ಒದಗಿಸಿದರೂ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ವೈಫಲ್ಯ ಅನುಭವಿಸಿದರಿಂದ ಭಾರತ ತಂಡ ಸಾಧಾರಣ ಮೊತ್ತ ದಾಖಲಿಸಿದೆ.

ಶಫಾಲಿ ವರ್ಮಾ
ಶಫಾಲಿ ವರ್ಮಾ

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಮಹಿಳಾ ಟಿ20 ವಿಶ್ವಕಪ್‌ನ ನಿರ್ಣಾಯಕ ಗ್ರೂಪ್-1 ಪಂದ್ಯದಲ್ಲಿ, ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡವು ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 158 ರನ್ ಗಳಿಸಿದೆ. ಆರಂಭಿಕ ಆಟಗಾರ್ತಿಯರು ಸ್ಪೋಟಕ ಆರಂಭ ಒದಗಿಸಿದರೂ, ಮಧ್ಯಮ ಕ್ರಮಾಂಕದ ಬ್ಯಾಟರ್‌ಗಳ ದಿಢೀರ್ ಕುಸಿತದಿಂದಾಗಿ ಭಾರತ ಬೃಹತ್ ಮೊತ್ತ ಕಲೆಹಾಕುವಲ್ಲಿ ವಿಫಲವಾಯಿತು. ಶಫಾಲಿ ವರ್ಮಾ 31 ರನ್​ಗಳಿಸಿ ತಂಡದ ಗರಿಷ್ಠ ಸ್ಕೋರರ್ ಎನಿಸಿಕೊಂಡರು. ಹರ್ಮನ್​ಪ್ರೀತ್ ಕೌರ್​ 24, ದೀಪ್ತಿ ಶರ್ಮಾ 29, ಮಾತ್ರ 20ರ ಗಡಿ ದಾಟಿದರು.

ಶೆಫಾಲಿ ವರ್ಮ ಸ್ಪೋಟಕ ಆರಂಭ

ಟಾಸ್ ಗೆದ್ದ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ ತಂಡಕ್ಕೆ ಆರಂಭಿಕ ಆಟಗಾರ್ತಿ ಶಫಾಲಿ ವರ್ಮಾ ಸ್ಫೋಟಕ ಆರಂಭ ಒದಗಿಸಿಕೊಟ್ಟರು. ಮೊದಲ ವಿಕೆಟ್ ಜೊತೆಯಾಟದಲ್ಲಿ 3 ಓವರ್​ಗಳಲ್ಲಿ 30 ರನ್​ ಜೊತೆಯಾಟ ನೀಡಿದರು. ಆದರೆ ಮಂಧಾನ 12 ಎಸೆತಗಳಲ್ಲಿ 17 ರನ್​ಗಳಿಸಿ ಮರಿಝಾನ್ ಕಾಪ್​ ಬೌಲಿಂಗ್​​​ನಲ್ಲಿ ಕ್ಲೀನ್ ಬೌಲ್ಡ್ ಆದರು. ಕೇವಲ 15 ಎಸೆತಗಳಲ್ಲಿ 4 ಬೌಂಡರಿ ಹಾಗೂ 1 ಸಿಕ್ಸರ್ ನೆರವಿನಿಂದ 31 ರನ್ ಸಿಡಿಸಿದ ಶಫಾಲಿ ವರ್ಮಾ ಶಬ್ನಿಮ್​ ಇಸ್ಮಾಯಿಲ್​ ಬೌಲಿಂಗ್​​ನಲ್ಲಿ ವಿಕೆಟ್ ಕೀಪರ್​ಗೆ ಕ್ಯಾಚ್ ನೀಡಿ ಔಟ್ ಆದರು.

ಯಸ್ತಿಕಾ ಭಾಟಿಯಾ 13 ಎಸೆತಗಳಲ್ಲಿ 15 ರನ್​ಗಳಿಸಿ ಅಯಬೊಂಗಾ ಖಾಕ ಬೌಲಿಂಗ್​​ನಲ್ಲಿ ಎಲ್​ಬಿಡಬ್ಲ್ಯು ಆದರು. ಆದರೆ ಮಧ್ಯಮ ಕ್ರಮಾಂಕದಲ್ಲಿ ಯಾರು ಗಟ್ಟಿಯಾಗಿ ಕ್ರೀಸ್​​ನಲ್ಲಿ ನೆಲೆಯೂರಿ ದೊಡ್ಡ ಮೊತ್ತ ಗಳಿಸಲು ಸಾಧ್ಯವಾಗಲಿಲ್ಲ. ತಮ್ಮ ವೃತ್ತಿಜೀವನದ 200ನೇ ಅಂತಾರಾಷ್ಟ್ರೀಯ ಟಿ20 ಪಂದ್ಯವನ್ನಾಡುತ್ತಿರುವ ನಾಯಕಿ ಹರ್ಮನ್‌ಪ್ರೀತ್ ಕೌರ್ 24 ರನ್ (22 ಎಸೆತ) ಗಳಿಸಿದರು. ಜೆಮಿಮಾ ರೋಡ್ರಿಗಸ್ (12), ಮತ್ತು ರಿಚಾ ಘೋಷ್ (15) ರನ್ ಗಳಿಸಿ ನಿಯಮಿತವಾಗಿ ವಿಕೆಟ್ ಒಪ್ಪಿಸಿದರು. ಆಲ್ರೌಂಡರ್ ದೀಪ್ತಿ ಶರ್ಮಾ 21 ಎಸೆತಗಳಲ್ಲಿ 29 ರನ್ ಗಳಿಸಿ ತಂಡದ ಮೊತ್ತ 150ರ ಗಡಿ ದಾಟಿಸಲು ನೆರವಾದರು.

ದಕ್ಷಿಣ ಆಫ್ರಿಕಾದ ಕಟ್ಟುನಿಟ್ಟಿನ ಬೌಲಿಂಗ್

ಆಫ್ರಿಕಾ ಪರ ಮಾರಿಝಾನ್ ಕ್ಯಾಪ್ (2/27) ಮತ್ತು ಹಿರಿಯ ವೇಗಿ ಶಬ್ನಿಮ್ ಇಸ್ಮಾಯಿಲ್ (2/28) ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ಮೂಲಕ ಭಾರತದ ರನ್ ವೇಗಕ್ಕೆ ಬ್ರೇಕ್ ಹಾಕಿದರು. ಮ್ಲಾಬಾ, ಅಯಬೊಂಗಾ ಖಾಕಾ ಹಾಗೂ ನಡೀನ್ ಡಿ ಕ್ಲರ್ಕ್​ ತಲಾ 1 ವಿಕೆಟ್ ಪಡೆದರು.



Source link

Leave a Reply

Your email address will not be published. Required fields are marked *

Latest News

View All

Search the Archives

Access over the years of investigative journalism and breaking reports

You May Have Missed