Last Updated:
2027ರ ಏಕದಿನ ವಿಶ್ವಕಪ್‌ಗೆ ಟೀಮ್ ಇಂಡಿಯಾ ಸಿದ್ಧತೆ ಪ್ರಾರಂಭಿಸಿದೆ. ಈ ಐಸಿಸಿ ಮಹತ್ವದ ಟೂರ್ನಿಗೆ ಭಾರತ ತಂಡದ ಆಯ್ಕೆ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಈಗ ಮಾಜಿ ದಿಗ್ಗಜ ಬ್ಯಾಟರ್ ಸುನಿಲ್ ಗವಾಸ್ಕರ್ ತಮ್ಮ ನೆಚ್ಚಿನ 15 ಸದಸ್ಯರ ಭಾರತ ತಂಡವನ್ನು ಆಯ್ಕೆ ಮಾಡಿದ್ದಾರೆ.
ಐಸಿಸಿ (ICC) 2027ರ ಏಕದಿನ (ODI) ವಿಶ್ವಕಪ್(World Cup)ಗೆ ಟೀಮ್ ಇಂಡಿಯಾ (Team India) ಸಿದ್ಧತೆ ಪ್ರಾರಂಭಿಸಿದೆ. ಭಾರತದ ಬ್ಯಾಟಿಂಗ್ ಬಲವಾಗಿ ಕಾಣುತ್ತಿದೆ. ಆದ್ದರಿಂದ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್ ಈಗ ಬೌಲಿಂಗ್ ಮೇಲೆ ಹೆಚ್ಚು ಗಮನ ಕೊಡುತ್ತಿದೆ. ಪ್ರಸಿದ್ಧ್ ಕೃಷ್ಣ(Prasidh Krishna ), ಪ್ರಿನ್ಸ್ ಯಾದವ್ (Prince Yadav) ಮತ್ತು ಗುರ್ನೂರ್ ಬ್ರಾರ್(Gurnoor Brar )ರಂತಹ ಯುವ ಬೌಲರ್‌ಗಳಿಗೆ ಅವಕಾಶ ನೀಡಲಾಗುತ್ತಿದೆ. 2027ರ ವಿಶ್ವಕಪ್ ಭಾರತಕ್ಕೆ ತುಂಬಾ ಮುಖ್ಯವಾದುದು. ಆದ್ದರಿಂದ ಅನೇಕ ಅನುಭವಿಗಳು ಈ ಟೂರ್ನಿಗೆ ತಮ್ಮ ನೆಚ್ಚಿನ 15 ಸದಸ್ಯರ ತಂಡವನ್ನು ಆಯ್ಕೆ ಮಾಡುತ್ತಿದ್ದಾರೆ.
ಈಗ ಸುನಿಲ್ ಗವಾಸ್ಕರ್ ವಿಶ್ವಕಪ್‌ಗೆ ಟೀಮ್ ಇಂಡಿಯಾದಲ್ಲಿ ಯಾವ 15 ಆಟಗಾರರು ಇರಬೇಕೆಂದು ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಭಾರತದ ಮಾಜಿ ದಿಗ್ಗಜ ಬ್ಯಾಟರ್ ಸುನಿಲ್ ಗವಾಸ್ಕರ್ ಇತ್ತೀಚೆಗೆ ಇಂಡಿಯಾ ಟುಡೇ ಜೊತೆ ಮಾತನಾಡುತ್ತಾ 2027ರ ಏಕದಿನ ವಿಶ್ವಕಪ್‌ಗಾಗಿ ಟೀಮ್ ಇಂಡಿಯಾವನ್ನು ಆಯ್ಕೆ ಮಾಡಿದ್ದಾರೆ.
ಗವಾಸ್ಕರ್, ರಿಷಭ್ ಪಂತ್ ಮತ್ತು ಯಶಸ್ವಿ ಜೈಸ್ವಾಲ್ ಅವರನ್ನು ತಮ್ಮ ತಂಡದಿಂದ ಕೈ ಬಿಟ್ಟಿದ್ದಾರೆ. ಹಾರ್ದಿಕ್ ಪಾಂಡ್ಯಗೆ ಗಾಯವಾಗಿರುವುದರಿಂದ, ಗವಾಸ್ಕರ್ ನಿತೀಶ್ ಕುಮಾರ್ ರೆಡ್ಡಿ ಅವರನ್ನು ಬ್ಯಾಕಪ್ ಆಗಿ ಆಯ್ಕೆ ಮಾಡಿದ್ದಾರೆ. ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್ ಮತ್ತು ಕುಲದೀಪ್ ಯಾದವ್ ಕೂಡ ಅನುಭವಿ ಆಟಗಾರರ ತಂಡದಲ್ಲಿ ಸ್ಥಾನ ಪಡೆದಿದ್ದಾರೆ.
ಇತ್ತೀಚೆಗೆ ರವಿ ಶಾಸ್ತ್ರಿ ಟೀಮ್ ಇಂಡಿಯಾದ ಏಕದಿನ ತಂಡದ ಬಗ್ಗೆ ಅಭಿಪ್ರಾಯ ಹೇಳಿದ್ದರು. ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ ಇಬ್ಬರನ್ನೂ ತಮ್ಮ ತಂಡಕ್ಕೆ ಸೇರಿಸಿದರು. ಆದರೆ ಸುನಿಲ್ ಗವಾಸ್ಕರ್ ಅವರನ್ನು (ಭುವಿ ಮತ್ತು ಶಮಿ) ಬಿಟ್ಟು, ಅರ್ಷದೀಪ್ ಸಿಂಗ್ ಮತ್ತು ಹರ್ಷಿತ್ ರಾಣಾ ಅವರನ್ನು ತಮ್ಮ ತಂಡಕ್ಕೆ ಸೇರಿಸಿದ್ದಾರೆ.
ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ರವೀಂದ್ರ ಜಡೇಜಾ, ಜಸ್ಪ್ರೀತ್ ಬುಮ್ರಾ, ಅರ್ಷ್‌ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಇಶಾನ್ ಕಿಶನ್, ನಿತೀಶ್ ಕುಮಾರ್ ರೆಡ್ಡಿ.














