Last Updated:
ರಾಕಿಂಗ್ ಸ್ಟಾರ್ ಯಶ್ (Rocking star Yash) ಅಭಿನಯದ ಟಾಕ್ಸಿಕ್ (Toxic) ಸಿನಿಮಾ ಬುಧವಾರದಿಂದ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ನಡುವೆ ತಮ್ಮ ಸಿನಿಮಾ ರಿಲೀಸ್ ಸಮಯದಲ್ಲಿ ಯಶ್ ಪಾಲಿಸಿಕೊಂಡು ಬರುತ್ತಿರುವ ಒಂದು ವಿಶೇಷ ಸಂಪ್ರದಾಯ ಮತ್ತೊಮ್ಮೆ ಗಮನ ಸೆಳೆದಿದೆ.
ರಾಕಿಂಗ್ ಸ್ಟಾರ್ ಯಶ್ (Rocking star Yash) ಅಭಿನಯದ ಟಾಕ್ಸಿಕ್ (Toxic) ಸಿನಿಮಾ ಬುಧವಾರದಿಂದ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ಈ ನಡುವೆ ತಮ್ಮ ಸಿನಿಮಾ ರಿಲೀಸ್ ಸಮಯದಲ್ಲಿ ಯಶ್ ಪಾಲಿಸಿಕೊಂಡು ಬರುತ್ತಿರುವ ಒಂದು ವಿಶೇಷ ಸಂಪ್ರದಾಯ ಮತ್ತೊಮ್ಮೆ ಗಮನ ಸೆಳೆದಿದೆ. ತಮ್ಮ ಸಿನಿಮಾಗಳು ಬಿಡುಗಡೆಯಾಗುವ ಮುನ್ನ ಧರ್ಮಸ್ಥಳಕ್ಕೆ ತೆರಳಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸುವ ಪದ್ಧತಿಯನ್ನು ಯಶ್ ಹಲವು ವರ್ಷಗಳಿಂದ ಮುಂದುವರೆಸಿಕೊಂಡು ಬಂದಿದ್ದಾರೆ. ಇದೀಗ ಬಹುನಿರೀಕ್ಷಿತ ಟಾಕ್ಸಿಕ್ ಸಿನಿಮಾ ಬಿಡುಗಡೆಯ ಹೊಸ್ತಿಲಲ್ಲೂ ಇದೇ ಸಂಪ್ರದಾಯವನ್ನು ಪಾಲಿಸಿರುವುದು ಅಭಿಮಾನಿಗಳ ಗಮನ ಸೆಳೆದಿದೆ.














