Last Updated:
ಖರ್ಗೆ ಅವರು ಆ ರೀತಿ ಖಡಕ್ ವಾರ್ನಿಂಗ್ ಕೊಟ್ಟ ಬಳಿಕವೂ ಸಚಿವ ಈಶ್ವರ್ ಖಂಡ್ರೆ ಮತ್ತೆ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ವಾರ್ನಿಂಗ್ಗೂ ಡೊಂಟ್ ಕೇರ್ ಎಂದ್ರಾ ಸಚಿವ ಈಶ್ವರ್ ಖಂಡ್ರೆ? ಎನ್ನುವ ಪ್ರಶ್ನೆ ಮೂಡಿದೆ.
ಚಾಮರಾಜನಗರ: ಸಿಎಂ (CM) ಹಾಗೂ ಡಿಸಿಎಂ (DCM) ಬದಲಾವಣೆ ವಿಚಾರದ ಬಗ್ಗೆ ನಿರ್ಧಾರ ತೆಗೆದುಕೊಳ್ಳಲು ನಾನು, ರಾಹುಲ್ ಗಾಂಧಿ (Rahul Gandhi) ಇದ್ದೇವೆ. ಯಾವಾಗ ಏನು ಮಾಡಬೇಕು ಎಂದು ನಮಗೆ ಟಾರ್ಗೆಟ್ ಇರುತ್ತದೆ. ಅದನ್ನು ನೋಡಿಕೊಂಡು ನಾವೇ ನಿರ್ಣಯ ತೆಗೆದುಕೊಳ್ಳುತ್ತೇವೆ. ರಾಜ್ಯ ಕಾಂಗ್ರೆಸ್ ನಾಯಕರೆಲ್ಲರೂ (State Congress leaders) ಬಾಯಿ ಮುಚ್ಚಿಕೊಂಡು ಇರಬೇಕು. ಕಾಂಗ್ರೆಸ್ ಪಕ್ಷ ನಿಮಗೆ ಕೊಟ್ಟಿರುವ ಕೆಲಸವನ್ನು ಮೊದಲು ಮಾಡಿ. ಯಾವಾಗ ಏನು ಮಾಡಬೇಕೆಂಬುದು ಹೈಕಮಾಂಡ್ಗೆ ಗೊತ್ತಿದೆ. ಕೆಲವರು ಹೇಳಿದ್ದಂತೆ ಹೈಕಮಾಂಡ್ ನಡೆಯಲ್ಲ. ಸುಮ್ನೆ ಮಾತಾಡುವುದ್ರಿಂದ ಪ್ರಯೋಜನ ಆಗಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ (AICC President Mallikarjun Kharge) ವಾರ್ನಿಂಗ್ ಕೊಟ್ಟಿದ್ದಾರೆ.
ಖರ್ಗೆ ಅವರು ಆ ರೀತಿ ಖಡಕ್ ವಾರ್ನಿಂಗ್ ಕೊಟ್ಟ ಬಳಿಕವೂ ಸಚಿವ ಈಶ್ವರ್ ಖಂಡ್ರೆ ಮತ್ತೆ ಸಿಎಂ ಸಿದ್ದರಾಮಯ್ಯ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ. ಈ ಮೂಲಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರ ವಾರ್ನಿಂಗ್ಗೂ ಡೊಂಟ್ ಕೇರ್ ಎಂದ್ರಾ ಸಚಿವ ಈಶ್ವರ್ ಖಂಡ್ರೆ? ಎನ್ನುವ ಪ್ರಶ್ನೆ ಮೂಡಿದೆ.
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರದಲ್ಲಿ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ ಅರಣ್ಯ ಸಚಿವ ಖಂಡ್ರೆ ಅವರು, ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಬದಲಾಗ್ತಾರಾ ಎಂಬ ಪ್ರಶ್ನೆಗೆ ನೇರವಾಗಿಯೇ ಉತ್ತರಿಸಿದ ಅವರು, ನಿಮ್ಗೆ ಗೊತ್ತಾಗ್ತಾ ಇಲ್ವಾ ಈಗ?? ಕುರ್ಚಿ ಖಾಲಿ ಆಗಿದ್ಯಾ? ಎಂದು ಪ್ರಶ್ನೆ ಮಾಡಿದ್ದಾರೆ.
ಸಿದ್ದರಾಮಯ್ಯ ಅವರ ನಾಯಕತ್ವದಲ್ಲೇ ನಾವು ಮುಂದುವರೆಯುತ್ತೇವೆ. ಅವರ ನಾಯಕತ್ವದಲ್ಲೇ ಮುಂದಿನ ಐದು ವರ್ಷ ಮುಂದುವರೆಯುತ್ತೇವೆ ಎಂದು ಹೇಳುವ ಮೂಲಕ ಪರೋಕ್ಷವಾಗಿ ಸಿದ್ದರಾಮಯ್ಯರೇ ಮುಂದಿನ ಐದು ವರ್ಷ ಮುಂದುವರೆಯಲ್ಲಿದ್ದಾರೆ ಎಂದು ಮಾರ್ಮಿಕವಾಗಿ ನುಡಿದಿದ್ದಾರೆ.
ಕರ್ನಾಟಕ ಕಾಂಗ್ರೆಸ್ನಲ್ಲಿ ಕಳೆದ ಮೂರ್ನಾಲ್ಕು ತಿಂಗಳಿನಿಂದ ಸಾಕಷ್ಟು ರಾಜಕೀಯ ಬೆಳವಣಿಗೆಗಳು ನಡೆಯುತ್ತಿವೆ. ಕೆಪಿಸಿಸಿ ಅಧ್ಯಕ್ಷ ಬದಲಾವಣೆ, ಸಚಿವ ಸಂಪುಟ ವಿಸ್ತರಣೆ ಹಾಗೂ ಸಿಎಂ ಬದಲಾವಣೆ ವಿಚಾರ ಬಗ್ಗೆ ಕಾಂಗ್ರೆಸ್ ಚರ್ಚೆಗಳು ನಡೆಯುತ್ತಿದ್ದು, ಈ ಬಗ್ಗೆ ನಾಯಕರು ಪರೋಕ್ಷವಾಗಿ ಆರೋಪ-ಪ್ರತ್ಯಾರೋಪ ಮಾಡುತ್ತಲೇ ಇದ್ದಾರೆ. ಅದರಲ್ಲೂ ಮುಖ್ಯವಾಗಿ ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ನಡೆಯುತ್ತಿರುವ ಚರ್ಚೆ ಪ್ರಾಮುಖ್ಯತೆ ಪಡೆದುಕೊಂಡಿದೆ.
ಸಿಎಂ ಬದಲಾವಣೆ ಮಾಡಬೇಕೆಂದು ಡಿಕೆ ಶಿವಕುಮಾರ್ ಸೇರಿದಂತೆ ಅವರ ಬಣದ ಶಾಸಕರು ಪಟ್ಟು ಹಿಡಿದಿದ್ದಾರೆ. ಆದ್ರೆ, ಇತ್ತ ಸಿಎಂ ಸಿದ್ದರಾಮಯ್ಯ ಬಣ ಯಾವುದೇ ಬದಲಾವಣೆ ಇಲ್ಲ. ಸಿದ್ದರಾಮಯ್ಯನವರೇ ಪೂರ್ವವಧಿ ಮುಖ್ಯಮಂತ್ರಿಯಾಗಿಯೇ ಇರುತ್ತಾರೆ ಎನ್ನುತ್ತಿದ್ದಾರೆ. ಇದರಿಂದ ಪರಸ್ಪರ ಮುಸುಕಿನ ತಿಕ್ಕಾಟ ನಡೆಯುತ್ತಿದೆ.
ಇದೀಗ ಇದಕ್ಕೆ ಖುದ್ದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದು, ಈಗ ಸಿಎಂ ಬದಲಾವಣೆ ಅದೆಲ್ಲಾ ಇಲ್ಲ. ಯಾವಾಗ ಸಿಎಂ ಬದಲಾವಣೆ ಮಾಡಬೇಕೆಂದು ನಮಗೆ ಗೊತ್ತಿದೆ, ಆಗ ಸಿಎಂ ಬದಲಾವಣೆ ಮಾಡುತ್ತೇವೆ ಎಂದು ಸ್ಪಷ್ಟಪಡಿಸಿದರು. ಈ ಮೂಲಕ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ ಎಳೆದಿದ್ದಾರೆ.
(ವರದಿ: ಎಸ್ಎಂ ನಂದೀಶ್ ನ್ಯೂಸ್ 18 ಕನ್ನಡ, ಚಾಮರಾಜನಗರ)
Chamarajanagar,Karnataka













